
ಮಾಜಿ ಸಚಿವ ಎಚ್.ಡಿ. ರೇವಣ್ಣ ಹಾಗೂ ಅವರ ಪುತ್ರ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದ್ದು, ಇದರ ವಿಚಾರಣೆಗಾಗಿ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು ರಚಿಸಿದೆ.
ಪ್ರಕರಣ ದಾಖಲಿಸಿಕೊಂಡಿರುವ ಎಸ್ಐಟಿ ತಂಡ ಈಗಾಗಲೇ ಸಂತ್ರಸ್ತೆ ಹೇಳಿಕೆಯನ್ನು ದಾಖಲಿಸಿಕೊಂಡು ಪ್ರಕರಣದ ಆರೋಪಿಗಳಾಗಿರುವ ರೇವಣ್ಣ ಹಾಗೂ ಅವರ ಪುತ್ರ ಪ್ರಜ್ವಲ್ ರೇವಣ್ಣ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ನೋಟಿಸ್ ನೀಡಿದೆ.
ಇದರ ಮಧ್ಯೆ ಈ ಎಲ್ಲ ಸಂಕಷ್ಟಗಳಿಂದ ಪಾರಾಗಲು ಅಪಾರ ದೈವಭಕ್ತರಾಗಿರುವ ಎಚ್.ಡಿ. ರೇವಣ್ಣ ಹೋಮ ಹವನದ ಮೊರೆ ಹೋಗಿದ್ದಾರೆ ಎಂದು ಹೇಳಲಾಗಿದೆ. ಹೊಳೆನರಸೀಪುರದ ರೇವಣ್ಣ ನಿವಾಸದಲ್ಲಿ ಬೆಳಿಗ್ಗೆಯಿಂದಲೂ ಪೂಜಾ ಕಾರ್ಯಗಳು ನಡೆಯುತ್ತಿದ್ದು, ಕುಟುಂಬ ಸದಸ್ಯರು ಪಾಲ್ಗೊಂಡಿದ್ದಾರೆ.