ಬೆಂಗಳೂರು : ರೈತರ ಪರವಾಗಿ ಮಾತನಾಡುತ್ತೇನೆ ಎಂದು ಹೇಳಿಕೊಳ್ಳಲು ಕುಮಾರಸ್ವಾಮಿ ಅವರಿಗೆ ಯಾವುದೇ ನೈತಿಕ ಅಧಿಕಾರವಿಲ್ಲ ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ನಟ ಚೇತನ್ ‘ಹೆಚ್. ಡಿ. ಕುಮಾರಸ್ವಾಮಿ ಕೇಂದ್ರದಲ್ಲಿ ಎನ್ ಡಿಎ ಸರ್ಕಾರದ ಕೃಷಿ ಖಾತೆಯ ಮೇಲೆ ಕಣ್ಣಿಟ್ಟಿರುವುದು ವಿಪರ್ಯಾಸ.
2020 ರಲ್ಲಿ, ಆಡಳಿತಾರೂಢ ಬಿಜೆಪಿಯ ಬೆಂಬಲದೊಂದಿಗೆ ಜೆಡಿಎಸ್ 79 (ಎ) (ಬಿ) (ಸಿ) ಅನ್ನು ರದ್ದುಗೊಳಿಸಿತು. ಇದು ಕೈಗಾರಿಕೋದ್ಯಮಿಗಳು ಮತ್ತು ಕಾರ್ಪೊರೇಟ್ ಗೂಂಡಾಗಳಿಗೆ ಕೃಷಿ ಭೂಮಿಯನ್ನು ಖರೀದಿಸುವ ಹಕ್ಕನ್ನು ನೀಡಿತು.ರೈತರ ಪರವಾಗಿ ಮಾತನಾಡುತ್ತೇನೆ ಎಂದು ಹೇಳಿಕೊಳ್ಳಲು ಕುಮಾರಸ್ವಾಮಿ ಅವರಿಗೆ ಯಾವುದೇ ನೈತಿಕ ಅಧಿಕಾರವಿಲ್ಲ ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ.