ಬೆಂಗಳೂರು : ಮಾರ್ಚ್ 1 ರಂದು ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇರಿಸಿ ಒಂಬತ್ತು ಜನರನ್ನು ಗಾಯಗೊಳಿಸಿದ ಶಂಕಿತ ವ್ಯಕ್ತಿಯ ಕ್ಲಿಯರ್ ಫೋಟೋಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬಿಡುಗಡೆ ಮಾಡಿದೆ. ಈತನ ಸುಳಿವು ಸಿಕ್ಕಲ್ಲಿ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ.
ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬರ್ ಬಗ್ಗೆ ಸುಳಿವು ನೀಡಿದ್ರೆ 10 ಲಕ್ಷ ಬಹುಮಾನ ನೀಡುವುದಾಗಿ ಎನ್ ಐ ಎ ಘೋಷಣೆ ಮಾಡಿದೆ. ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣವನ್ನು ಎನ್ ಐ ಎ ಕೈಗೆತ್ತಿಕೊಂಡು ತನಿಖೆ ನಡೆಸುತ್ತಿದೆ. ಬಾಂಬರ್ ಬಗ್ಗೆ ಸುಳಿವು ನೀಡಿದ್ರೆ 10 ಲಕ್ಷ ಬಹುಮಾನ ನೀಡುವುದಾಗಿ ಎನ್ ಐ ಎ ಘೋಷಣೆ ಮಾಡಿದೆ.
ರಾಮೇಶ್ವರಂ ಕೆಫೆ’ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸಿದ್ದ ಉಗ್ರನ ಫೋಟೋ ರಿವೀಲ್ ಆಗಿತ್ತು. ಇದೀಗ ಗಾಯಗೊಳಿಸಿದ ಶಂಕಿತ ವ್ಯಕ್ತಿಯ ಕ್ಲಿಯರ್ ಫೋಟೋಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬಿಡುಗಡೆ ಮಾಡಿದೆ.