
ಈ ಬಾರಿ ಐಪಿಎಲ್ ನಲ್ಲಿ ಪ್ರತಿ ತಂಡಗಳಿಂದ ರನ್ ಹೊಳೆ ಹರಿಯುತ್ತಿದ್ದು, ಇದರ ಜೊತೆಗೆ ಬೌಲರ್ಗಳು ಸಹ ಮೂರು ನಾಲ್ಕು ವಿಕೆಟ್ ಕಬಳಿಸುವ ಮೂಲಕ ಗಮನ ಸೆಳೆಯುತ್ತಿದ್ದಾರೆ.
ಮುಂಬೈ ಇಂಡಿಯನ್ಸ್ ತಂಡದ ಪ್ರಮುಖ ಬೌಲರ್ ಜಸ್ಪ್ರೀತ್ ಬುಮ್ರಾ ನಿನ್ನೆಯ ಪಂದ್ಯದಲ್ಲಿ ಮೂರು ವಿಕೆಟ್ ಪಡೆದುಕೊಳ್ಳುವ ಮೂಲಕ ಈ ಬಾರಿ ಐಪಿಎಲ್ ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದಿರುವವರ ಪಟ್ಟಿಯಲ್ಲಿ ನಂಬರ್ ಒನ್ ಸ್ಥಾನ ಪಡೆದುಕೊಂಡಿದ್ದಾರೆ.
ಈ ಬಾರಿ ಐಪಿಎಲ್ ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿ ಈ ರೀತಿ ಇದೆ;
ಆಟಗಾರ ತಂಡ ವಿಕೆಟ್
ಜಸ್ಪ್ರೀತ್ ಬುಮ್ರಾ ಮುಂಬೈ ಇಂಡಿಯನ್ಸ್ 17
ಟಿ.ನಟರಾಜನ್ ಸನ್ ರೈಸರ್ಸ್ ಹೈದ್ರಾಬಾದ್ ತಂಡ 15
ಮುಸ್ತಫಿಜುರ್ ರೆಹಮಾನ್ ಚೆನ್ನೈ ಸೂಪರ್ ಕಿಂಗ್ಸ್ 14
ಹರ್ಷಲ್ ಪಟೇಲ್ ಪಂಜಾಬ್ ಕಿಂಗ್ಸ್ 14
ಸುನಿಲ್ ನರೈನ್ ಕೊಲ್ಕತ್ತಾ ನೈಟ್ ರೈಡರ್ಸ್ 13