alex Certify ಈ ಪ್ರಕರಣದ ಪ್ರೊಡ್ಯೂಸರ್ – ಡೈರೆಕ್ಟರ್ ಎಲ್ಲವೂ ಅವರೇ; HDK ಗೆ ಡಿಕೆಶಿ ಟಾಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈ ಪ್ರಕರಣದ ಪ್ರೊಡ್ಯೂಸರ್ – ಡೈರೆಕ್ಟರ್ ಎಲ್ಲವೂ ಅವರೇ; HDK ಗೆ ಡಿಕೆಶಿ ಟಾಂಗ್

ಯಾರ ಮನಸ್ಸು, ನಾಲಿಗೆಯಲ್ಲಿ ಏನಿದೆ ಎಂಬುದು ಈಗ ತಿಳಿಯುತ್ತಿದೆ: ಡಿ.ಕೆ. ಶಿವಕುಮಾರ್

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತಿದ್ದು, ಇದರ ಮಧ್ಯೆ ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಿರುವ ಆರೋಪದಲ್ಲಿ ಮಾಜಿ ಸಚಿವ ಎಚ್.ಡಿ. ರೇವಣ್ಣ ಮೇ 14ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ.

ಇದೇ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ಮಾತಿನ ಸಮರ ಮುಂದುವರೆದಿದ್ದು, ಇದೀಗ ಎಚ್ಡಿಕೆ ಆರೋಪಗಳಿಗೆ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಈ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿರುವ ಡಿ.ಕೆ. ಶಿವಕುಮಾರ್, ಕುಮಾರಸ್ವಾಮಿ ಅವರು ಹಿಟ್‌ ಅಂಡ್‌ ರನ್‌ ಗಿರಾಕಿ ಅನ್ನೋದು ರಾಜ್ಯದ ಜನತೆಗೆ ಚೆನ್ನಾಗಿ ಗೊತ್ತಿದೆ. ಅವರು ಈ ಹಿಂದಿನಿಂದಲೂ ಮಾಡಿದ ಆರೋಪಗಳು ಯಾವುದೂ ಸಾಬೀತಾಗಿಲ್ಲ, ಪ್ರಜ್ವಲ್‌ ರೇವಣ್ಣ ಸೆಕ್ಸ್‌ ಗೇಟ್‌ ಪ್ರಕರಣದಲ್ಲಿ ನನ್ನ ಹೆಸರು ಮುನ್ನಲೆಗೆ ತಂದರೆ ಇಡೀ ರಾಜ್ಯದ ಗಮನ ಸೆಳೆಯಬಹುದು ಎನ್ನುವ ಕಾರಣಕ್ಕೆ ಅವರು ಪದೇ ಪದೇ ನನ್ನ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ.

ಈ ಕೇಸಿನ ಹಿಂದೆ ಇರುವುದು ಬ್ಲಾಕ್‌ ಮೇಲ್‌ ಕಿಂಗ್‌ ಕುಮಾರಸ್ವಾಮಿ. ರಾಜಕಾರಣಿಗಳು, ಅಧಿಕಾರಿಗಳನ್ನು ಬ್ಲಾಕ್‌ ಮೇಲ್‌ ಮಾಡುವುದೇ ಅವರ ಕೆಲಸ. ಅವರಿಗೆ ದಿನಕ್ಕೊಮ್ಮೆ ನನ್ನ ಹೆಸರು ಎತ್ತದಿದ್ದರೆ ನಿದ್ದೆ ಬರಲ್ಲ. ಈಗಲೂ ನಾನು ಹೇಳುತ್ತಿದ್ದೇನೆ ಈ ಪ್ರಕರಣದ ಕಥಾನಾಯಕ, ಡೈರೆಕ್ಟರ್, ಪ್ರೋಡ್ಯೂಸರ್ ಎಲ್ಲಾ ಕುಮಾರಸ್ವಾಮಿ ಅವರೇ.

ನಮ್ಮದು ರೇವಣ್ಣ ಅವರದು ಬೇರೆ ಕುಟುಂಬ ಅಂತ ಹಿಂದೆ ಅವರೇ ಹೇಳಿದ್ದರು. ಉಪ್ಪು ತಿಂದವನು ನೀರು ಕುಡಿಯಬೇಕು ಅಂತ ಕೂಡ ಹೇಳಿದ್ರು, ಈಗ ಯಾಕೆ ಮತ್ತೆ ಹಿಟ್‌ ಅಂಡ್‌ ರನ್‌ ಮಾಡ್ತಿದ್ದಾರೆ ? ಪ್ರಕರಣ ಇನ್ನೂ ತನಿಖೆ ಹಂತದಲ್ಲಿದೆ, ಈಗಲೇ ತೀರ್ಪು ಕೊಡೋಕೆ ಕುಮಾರಸ್ವಾಮಿ ಅವರೇನು ಲಾಯರೋ ? ಜಡ್ಜೋ ? ಚರ್ಚೆ ಮಾಡಲು ಇನ್ನೂ ಟೈಮ್ ಇದೆ, ವಿಧಾನಸಭೆ ಅಧಿವೇಶನ ಇದೆ, ಎಲ್ಲಾ ತೆಗೆದುಕೊಂಡು ಬರಲಿ ಚರ್ಚೆ ಮಾಡೋಣ ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...