alex Certify ವ್ಯಕ್ತಿಯನ್ನು ಬೂಟು ಕಾಲಿಂದ ಒದ್ದ ಪೊಲೀಸ್ ವರಿಷ್ಠಾಧಿಕಾರಿ: ವಿಡಿಯೋ ವೈರಲ್​ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವ್ಯಕ್ತಿಯನ್ನು ಬೂಟು ಕಾಲಿಂದ ಒದ್ದ ಪೊಲೀಸ್ ವರಿಷ್ಠಾಧಿಕಾರಿ: ವಿಡಿಯೋ ವೈರಲ್​

Tamil Nadu Krishnagiri SP Saroj Kumar Thakur Kicking Man Video Goes Viral Police Officer Says He Was Trying To Molest Women | Police Kicks Man: 'वो महिलाओं से छेड़खानी कर रहा था',ಚೆನ್ನೈ: ತಮಿಳುನಾಡಿನ ಕೃಷ್ಣಗಿರಿಯ ಪೊಲೀಸ್ ವರಿಷ್ಠಾಧಿಕಾರಿ ಸರೋಜ್ ಕುಮಾರ್ ಠಾಕೂರ್ ಅವರು ನೆಲದ ಮೇಲೆ ಕುಳಿತಿದ್ದ ವ್ಯಕ್ತಿಯನ್ನು ಒದೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಕೊನೆಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಠಾಕೂರ್​ ಅವರು, ಈ ವ್ಯಕ್ತಿ ಮಹಿಳೆಯರಿಗೆ ಕಿರುಕುಳ ನೀಡಲು ಪ್ರಯತ್ನಿಸುತ್ತಿದ್ದ. ಈ ಕಾರಣದಿಂದ ಆತನಿಗೆ ಒದೆಯುತ್ತಿದ್ದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಚೆನ್ನೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಹೊಸೂರು ಬಳಿ ಕಾರ್ಯಕ್ರಮ ನಡೆಸಲು ಜಿಲ್ಲಾಡಳಿತದಿಂದ ಅನುಮತಿ ಪಡೆಯುವಲ್ಲಿ ವಿಳಂಬವಾದ ಹಿನ್ನೆಲೆಯಲ್ಲಿ ಉಂಟಾದ ಹಿಂಸಾಚಾರವನ್ನು ನಿಯಂತ್ರಿಸಲು ಎಸ್ಪಿ ಮೈದಾನದಲ್ಲಿ ನಿಂತಿದ್ದರು. ಈ ಸಂದರ್ಭದಲ್ಲಿ ಈ ಘಟನೆ ನಡೆದಿರುವುದು ಅದರ ವಿಡಿಯೋ ವೈರಲ್​ ಆಗಿತ್ತು.

ಈ ಬಗ್ಗೆ ಪ್ರಶ್ನಿಸಿದಾಗ ಠಾಕೂರ್​ ಅವರು, ಇತರ ರಾಜ್ಯಗಳ ಪುರುಷರ ಗುಂಪು ಮಹಿಳೆಯರಿಗೆ ಕಿರುಕುಳ ನೀಡಲು ಪ್ರಯತ್ನಿಸುತ್ತಿತ್ತು. ಆ ಕ್ಷಣದಲ್ಲಿ ಪುಂಡರ ಗುಂಪು ಪೊಲೀಸರ ಕೈಗೆ ಸಿಕ್ಕಿಬಿದ್ದಿದೆ. ಈ ವ್ಯಕ್ತಿಗಳು ಉದ್ದೇಶಪೂರ್ವಕವಾಗಿ ತೊಂದರೆ ಸೃಷ್ಟಿಸಲು ಪ್ರಯತ್ನಿಸುತ್ತಿದ್ದರು ಎಂದಿದ್ದಾರೆ.

ಇಲ್ಲಿ ನಡೆಯುತ್ತಿರುವ ಜಲ್ಲಿಕಟ್ಟು ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪೊಲೀಸರು ಯುವಕರನ್ನು ಥಳಿಸಿದ್ದಾರೆ ಎಂಬ ಸುದ್ದಿಯನ್ನು ಅವರು ತಳ್ಳಿ ಹಾಕಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...