ಬೆಂಗಳೂರು : ಮಹಾಮಾರಿ ಡೆಂಗ್ಯೂ ಗೆ ಬೆಂಗಳೂರಲ್ಲಿ ಹೆಡ್ ಕಾನ್ಸ್ ಟೇಬಲ್ ಬಲಿಯಾಗಿದ್ದು, ಮೃತರ ಸಂಖ್ಯೆ 11 ಕ್ಕೇರಿಕೆಯಾಗಿದೆ.
ಬೆಂಗಳೂರಲ್ಲಿ ಜ್ವರದಿಂದ ಬಳಲುತ್ತಿದ್ದ ಹೆಡ್ ಕಾನ್ಸ್ ಟೇಬಲ್ ಸೋಮಶೇಖರ್ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸೇವೆ ಸಲ್ಲಿಸುತ್ತಿದ್ದಂತಹ ಸೋಮಶೇಖರ್ ಡೆಂಗ್ಯೂ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಡೆಂಗ್ಯೂ ಸಾವಿನ ಸಂಖ್ಯೆ ಮೃತರ ಸಂಖ್ಯೆ 11 ಕ್ಕೇರಿಕೆಯಾಗಿದೆ.