
ಹಾವೇರಿ : ಲೋ ಬಿಪಿಯಿಂದ ಹೆಡ್ ಕಾನ್ಸ್ ಟೇಬಲ್ ಓರ್ವರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಪಟ್ಟಣದಲ್ಲಿ ನಡೆದಿದೆ.
ರಟ್ಟಿಹಳ್ಳಿ ಪೊಲೀಸ್ ಠಾಣೆಯ ಬಸಪ್ಪ ಮಲ್ಲಾಡದ (48) ಮೃತರು. ಮೂಲತಃ ರಾಣೆಬೆನ್ನೂರು ತಾಲೂಕಿನ ಹಾರೋಗೊಪ್ಪ ನಿವಾಸಿಯಾಗಿರುವ ಬಸಪ್ಪ ಮಲ್ಲಾಡದ 26 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.
ಇದೀಗ ಕರ್ತವ್ಯ ನಿರತರಾಗಿದ್ದಾಗಲೇ ಲೋ ಬಿಪಿಯಿಂದ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ರಟ್ಟಿಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.