alex Certify ವಿದ್ಯಾರ್ಥಿನಿಯರಿಗೆ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ದೌರ್ಜನ್ಯ: ಶಿಕ್ಷಕನ ನೀಚಕೃತ್ಯಕ್ಕೆ ನಲುಗಿದ ಮಕ್ಕಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿನಿಯರಿಗೆ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ದೌರ್ಜನ್ಯ: ಶಿಕ್ಷಕನ ನೀಚಕೃತ್ಯಕ್ಕೆ ನಲುಗಿದ ಮಕ್ಕಳು

ಹೈದರಾಬಾದ್: ತೆಲಂಗಾಣದ ಭದ್ರಾದ್ರಿ ಕೊತಾಗುಡೇಮ್ ಜಿಲ್ಲೆಯಲ್ಲಿ ನಡೆದ ಘಟನೆಯಲ್ಲಿ ಸರ್ಕಾರಿ ಶಾಲೆ ಮುಖ್ಯ ಶಿಕ್ಷಕನೊಬ್ಬ ನೀಚ ಕೃತ್ಯವೆಸಗಿದ್ದಾನೆ.

7 ರಿಂದ 11 ವರ್ಷದ ವಿದ್ಯಾರ್ಥಿನಿಯರಿಗೆ ಅಶ್ಲೀಲ ವೀಡಿಯೋ ತೋರಿಸಿ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಕೊರೊನಾ ಕಾರಣದಿಂದಾಗಿ ಶಿಕ್ಷಕರು ಪಾಳಿಯಲ್ಲಿ ಕೆಲಸ ಮಾಡುತ್ತಿದ್ದರು. ಆದಿವಾಸಿಗಳು ಹೆಚ್ಚಾಗಿರುವ ಪ್ರದೇಶದ ಸರ್ಕಾರಿ ಶಾಲೆಯಲ್ಲಿ ಮುಖ್ಯಶಿಕ್ಷಕ ಕೆಲಸ ವಿದ್ಯಾರ್ಥಿನಿಯರಿಗೆ ಅಶ್ಲೀಲ ವೀಡಿಯೋ ತೋರಿಸಿ ನಿರಂತರವಾಗಿ ಲೈಂಗಿಕ ದೌರ್ಜನ್ಯವೆಸಗಿದ್ದಾನೆ.

ನಿರಂತರ ದೌರ್ಜನ್ಯದಿಂದ ಅಸ್ವಸ್ಥಳಾಗಿದ್ದ ಬಾಲಕಿಯೊಬ್ಬಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆ ಮುಖ್ಯಶಿಕ್ಷಕನ ಕೃತ್ಯದ ಬಗ್ಗೆ ತಾಯಿಗೆ ತಿಳಿಸಿದ್ದಾಳೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಲಕ್ಷ್ಮಿದೇವಪಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಂಜಯ್ಯ ತಿಳಿಸಿದ್ದಾರೆ.

ಮಕ್ಕಳಿಗೆ ಪಾಠ ಮಾಡುವುದಾಗಿ ಶಾಲೆಗೆ ಕರೆಸಿಕೊಳ್ಳುತ್ತಿದ್ದ ಆರೋಪಿ ಶಾಲೆ ವೇಳೆಯಲ್ಲೇ ಇಂತಹ ಕೃತ್ಯವೆಸಗಿದ್ದಾನೆ. ಅಲ್ಲದೇ ಮಕ್ಕಳಿಗೆ ಬೆದರಿಕೆ ಹಾಕಿದ್ದಾನೆ. ಆತನ ವಿರುದ್ಧ ಪೋಕ್ಸೋ ಸೇರಿದಂತೆ ವಿವಿಧ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...