alex Certify BREAKING : ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ಎರಚಿದ ಆರೋಪ : ಮುಖ್ಯಶಿಕ್ಷಕ ಅಮಾನತು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ಎರಚಿದ ಆರೋಪ : ಮುಖ್ಯಶಿಕ್ಷಕ ಅಮಾನತು

ಚಿತ್ರದುರ್ಗ : 2ನೇ ತರಗತಿ ವಿದ್ಯಾರ್ಥಿನಿ ಮೇಲೆ ಸರ್ಕಾರಿ ಶಾಲೆ ಮುಖ್ಯ ಶಿಕ್ಷಕ ಆಸಿಡ್ ದಾಳಿ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಶಿಕ್ಷಕನನ್ನು ಅಮಾನತು ಮಾಡಲಾಗಿದೆ.

ಚಿತ್ರದುರ್ಗ ತಾಲೂಕಿನ ಜೋಡಿಚಿಕ್ಕೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ರಂಗಸ್ವಾಮಿ ಅವರು ಶೌಚಾಲಯ ತೊಳೆಯಲು ಬಳಸುವ ಆ್ಯಸಿಡ್ ಅನ್ನು ವಿದ್ಯಾರ್ಥಿನಿ ಮೇಲೆ ಎರಚಿದ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಮುಖ್ಯಶಿಕ್ಷಕನ ವಿರುದ್ಧ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಸದ್ಯ ಶಿಕ್ಷಕನನ್ನು ಅಮಾನತುಗೊಳಿಸಿ ಡಿಡಿಪಿಐ ರವಿಶಂಕರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.

ಆ್ಯಸಿಡ್ ಎರಚಿದ ಹಿನ್ನೆಲೆ ಬೆನ್ನಿಗೆ ಗಂಭೀರ ಗಾಯವಾಗಿ ವಿದ್ಯಾರ್ಥಿನಿ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾಳೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...