
ಬೆಂಗಳೂರು: ಆರೋಗ್ಯ ಇಲಾಖೆ ವತಿಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ 680 ಸಮುದಾಯ ಆರೋಗ್ಯಾಧಿಕಾರಿಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವುದು.
25 ಜಿಲ್ಲೆಗಳಲ್ಲಿ ಖಾಲಿ ಇರುವ 680 ಸಮುದಾಯ ಆರೋಗ್ಯ ಅಧಿಕಾರಿಗಳ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸಲು 2614 ಸಮುದಾಯ ಆರೋಗ್ಯ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳಲಾಗಿತ್ತು. ಈಗ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿ ಇರುವ 680 ಸಮುದಾಯ ಆರೋಗ್ಯ ಅಧಿಕಾರಿಗಳ ಹುದ್ದೆ ನೇಮಕಾತಿಗೆ ಲಿಖಿತ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಜನವರಿ 6 ರಿಂದ 23 ರವರೆಗೆ ಅರ್ಜಿ ಸಲ್ಲಿಸಬಹುದು. ಲಿಖಿತ ಪರೀಕ್ಷೆ ಜನವರಿ 29 ರಂದು ನಡೆಯಲಿದೆ https://karunadu.karnataka.gov.in ವೆಬ್ ಸೈಟ್ ಗಮನಿಸಬಹುದಾಗಿದೆ ಎಂದು ಹೇಳಲಾಗಿದೆ.