ಬೆಂಗಳೂರು: ರಾಜ್ಯದ ವೈದ್ಯಕೀಯ ಕ್ಷೇತ್ರದಲ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪನೆಯಾಗಿದೆ. ರಾಜ್ಯಕ್ಕೆ ದೆಹಲಿಯ ಏಮ್ಸ್ ಮಾದರಿ ಕೇಂದ್ರ ಮಂಜೂರು ಮಾಡುವ ಮನವಿಗೆ ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ.
ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರು ದೆಹಲಿಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ ಸುಖ್ ಮಾಂಡವಿಯಾ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ. ರಾಜ್ಯದಲ್ಲಿ ಏಮ್ಸ್ ಸಂಸ್ಥೆ ಸ್ಥಾಪನೆಗೆ ಅವರು ಮಾಡಿದ ಮನವಿಗೆ ಕೇಂದ್ರ ಸಚಿವರಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ.
ರಾಜ್ಯದಲ್ಲಿ ದೆಹಲಿಯ ಪ್ರತಿಷ್ಠಿತ ಏಮ್ಸ್ ಆಸ್ಪತ್ರೆ ಮಾದರಿ ಕೇಂದ್ರ ಆರಂಭಿಸುವಂತೆ ಸುಧಾಕರ್ ಮಾಡಿದ ಮನವಿಗೆ ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ.
ರಾಜ್ಯಕ್ಕೆ ಏಮ್ಸ್ ಸಂಸ್ಥೆ ನೀಡಲು ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸರ್ಕಾರಕ್ಕೆ, ಪ್ರಧಾನಿ ಮೋದಿ ಹಾಗೂ ಆರೋಗ್ಯ ಸಚಿವ ಮನ್ ಸುಖ್ ಮಾಂಡವಿಯಾ ಅವರಿಗೆ ಸಚಿವ ಸುಧಾಕರ್ ಧನ್ಯವಾದ ಹೇಳಿದ್ದಾರೆ. ರಾಜ್ಯದಲ್ಲಿ ಏಮ್ಸ್ ಕೇಂದ್ರ ಆರಂಭವಾದರೆ ಆರೋಗ್ಯ ಕ್ಷೇತ್ರದಲ್ಲಿ ಕರ್ನಾಟಕ ಮತ್ತಷ್ಟು ಮುಂಚೂಣಿಗೆ ಬರಲಿದೆ. ರಾಜ್ಯದ ಜನರಿಗೆ ವಿಶ್ವದರ್ಜೆಯ ಆರೋಗ್ಯಸೇವೆ ದೊರಕಿಸಿಕೊಡಲು ಸಹಾಯಕವಾಗಲಿದೆ ಎಂದು ತಿಳಿಸಿದ್ದಾರೆ.