ಬೆಂಗಳೂರು: ರಾಜ್ಯದಲ್ಲಿ ಕೃತಕ ಬಣ್ಣ ಬಳಸಿ ತಯಾರಿಸುವ ಗೋಬಿ ಮಂಚೂರಿಯನ್, ಕಾಟನ್ ಕ್ಯಾಂಡಿ ನಿಷೇಧಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ನಿಯಮ ಉಲ್ಲಂಘಿಸಿದವರಿಗೆ 7 ವರ್ಷ ಜೈಲು, 10 ಲಕ್ಷ ರೂಪಾಯಿ ದಂಡ ವಿಧಿಸಲಾಗುವುದು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡುರಾವ್ ಸೋಮವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ್ದು, ಆರೋಗ್ಯ ಇಲಾಖೆಯಿಂದ ಹೊರಡಿಸಿದ ಅಧಿಕೃತ ಆದೇಶ ಪ್ರತಿ ಪ್ರಕಟಿಸಿದ್ದಾರೆ. ರಾಜ್ಯದಲ್ಲಿ ಇನ್ನು ಮುಂದೆ ನಿಷೇಧಿತ ಕಲರ್ ಬಳಕೆ ಮಾಡಿ ತಯಾರಿಸುವ ಕಾಟನ್ ಕ್ಯಾಂಡಿ ಹಾಗೂ ಕೃತಕ ಬಣ್ಣ ಬಳಸಿ ತಯಾರಿಸುವ ಗೋಬಿ ಮಂಚೂರಿ ನಿಷೇಧ ಮಾಡಲಾಗಿದ್ದು, ನಿಯಮ ಉಲ್ಲಂಘಿಸಿದವರಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಾಗುವುದು.
ಕ್ಯಾನ್ಸರ್ ಸೇರಿ ಹಲವು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುವ ಬಣ್ಣಗಳನ್ನು ಬಳಕೆ ಮಾಡುವ ಹಿನ್ನಲೆಯಲ್ಲಿ ಕೃತಕ ಬಣ್ಣ ಬಳಸಿ ತಯಾರಿಸುವ ಗೋಬಿ ಮಂಚೂರಿಯನ್, ಕಾಟನ್ ಕ್ಯಾಂಡಿ ನಿಷೇಧಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಜನರ ಆರೋಗ್ಯದ ದೃಷ್ಟಿಯಿಂದ ಗೋಬಿ ಮಂಚೂರಿ ಮತ್ತು ಕಾಟನ್ ಕ್ಯಾಂಡಿ ತಯಾರಿಕೆಯಲ್ಲಿ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಕೃತಕ ಬಣ್ಣಗಳನ್ನು ಬಳಸುವುದನ್ನು ನಿಷೇಧಿಸುತ್ತಿದ್ದೇವೆ. ಇದನ್ನು ಉಲ್ಲಂಘಿಸಿದ್ದಲ್ಲಿ 7 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 10 ಲಕ್ಷದವರೆಗೆ ದಂಡ ವಿಧಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.