ಬೆಂಗಳೂರು: ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಸೌಲಭ್ಯ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಸಿಗಬೇಕು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಡಿಜಿಟಲ್ ಆರೋಗ್ಯ ಕಾರ್ಡ್ ಒದಗಿಸಲು ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ. ಬಜೆಟ್ನಲ್ಲಿ ಈ ಬಗ್ಗೆ ಘೋಷಿಸುವಂತೆ ಒತ್ತಾಯಿಸಲಾಗಿದೆ.
ರಾಜ್ಯ ಸರ್ಕಾರದ ಶಿಕ್ಷಣ ಸುಧಾರಣೆಗಳ ಸಲಹೆಗಾರ ಪ್ರೊ.ಎಂ.ಆರ್. ದೊರೆಸ್ವಾಮಿ ಈ ಕುರಿತು ಮಾಹಿತಿ ನೀಡಿದ್ದು, ಖಾಸಗಿ ಶಾಲೆ ಮಕ್ಕಳಿಗೆ ಸಿಗುವ ಸೌಲಭ್ಯಗಳು ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೂ ಸಿಗಬೇಕು. ರಾಜ್ಯದ 48 ಸಾವಿರ ಸರ್ಕಾರಿ ಶಾಲೆಗಳ ಮಕ್ಕಳಿಗೆ ಆರೋಗ್ಯ ಭಾಗ್ಯ ಕಲ್ಪಿಸಲು ವಿದ್ಯಾರ್ಥಿಗಳಿಗೆ ಡಿಜಿಟಲ್ ಆರೋಗ್ಯ ಕಾರ್ಡ್ ನೀಡುವಂತೆ ಶಿಫಾರಸು ಮಾಡಲಾಗಿದೆ. ಈ ಬಗ್ಗೆ ಬಜೆಟ್ ನಲ್ಲಿ ಘೋಷಿಸುವಂತೆ ಒತ್ತಾಯಿಸಲಾಗಿದೆ ಎಂದು ತಿಳಿಸಿದ್ದಾರೆ.
ಶಾಲೆಗಳಲ್ಲಿ ಮಕ್ಕಳಿಗೆ ಯೋಗ, ಧ್ಯಾನ ಕಲಿಕೆ ಸೇರಿದಂತೆ ಆರ್ಥಿಕವಾಗಿಹೊರೆಯಾಗದ ಕೆಲವು ಶಿಫಾರಸು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.