ಕಲಬುರಗಿ: 545 ಪಿಎಸ್ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ಅಕ್ರಮ ಪ್ರಕರಣದ ಕಿಂಗ್ ಪಿನ್ ರುದ್ರಗೌಡ ಪಾಟೀಲ್ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ.
ಸಿಐಡಿ ವಿಚಾರಣೆ ವೇಳೆ ರುದ್ರಗೌಡ ವಾಂತಿ ಮಾಡಿಕೊಂಡಿದ್ದು, ಆತನನ್ನು ಕಲಬುರ್ಗಿಯ ಜಿಮ್ಸ್ ಆಸ್ಪತ್ರೆಗೆ ಪೊಲೀಸರು ಕರೆದುಕೊಂಡು ಹೋಗಿದ್ದಾರೆ. ಜಿಮ್ಸ್ ಆಸ್ಪತ್ರೆಯಲ್ಲಿ ರುದ್ರಗೌಡನಿಗೆ ಚಿಕಿತ್ಸೆ ನೀಡಲಾಗಿದೆ. ವಾಂತಿಯಾದ ನಂತರ ರುದ್ರಗೌಡ ತೀವ್ರ ನಿತ್ರಾಣಗೊಂಡಿದ್ದಾರೆ. ಸದ್ಯ ಸಿಐಡಿ ಕಸ್ಟಡಿಯಲ್ಲಿರುವ ಕಿಂಗ್ ಪಿನ್ ರುದ್ರಗೌಡ ತೀವ್ರ ನಿತ್ರಾಣಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.
ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಆರೋಪಿ ಜ್ಯೋತಿ ಪಾಟೀಲ್ ಅವರನ್ನು ಬಂಧಿಸಿದ್ದಾರೆ. ಅಕ್ರಮ ನೇಮಕಾತಿ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 17 ಕ್ಕೆ ಏರಿಕೆಯಾಗಿದೆ.