alex Certify ಆರೋಗ್ಯ ಇಲಾಖೆಯಲ್ಲಿ 14,000ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಕ್ರಮ; ಹೈಕೋರ್ಟ್ ಗೆ ರಾಜ್ಯ ಸರ್ಕಾರದಿಂದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆರೋಗ್ಯ ಇಲಾಖೆಯಲ್ಲಿ 14,000ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಕ್ರಮ; ಹೈಕೋರ್ಟ್ ಗೆ ರಾಜ್ಯ ಸರ್ಕಾರದಿಂದ ಮಾಹಿತಿ

ಬೆಂಗಳೂರು: ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯಲ್ಲಿ 14,000ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಒಟ್ಟು 34,967 ಮಂಜೂರಾತಿ ಹುದ್ದೆಗಳ ಪೈಕಿ 14,523 ಹುದ್ದೆಗಳು ಖಾಲಿಯಿದ್ದು, ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದು ಹೈಕೋರ್ಟ್ ಗೆ ಸರ್ಕಾರ ಮಾಹಿತಿ ನೀಡಿದೆ.

ಹೈಕೋರ್ಟ್ ದಾಖಲಿಸಿಕೊಂಡಿದ್ದ ಸ್ವಯಂ ಪ್ರೇರಿತ ಪಿಐಎಲ್ ಅರ್ಜಿ ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ನ್ಯಾಯಾಲಯಕ್ಕೆ ಈ ವಿಷಯ ತಿಳಿಸಿದ್ದಾರೆ.

ಆರೋಗ್ಯ ಇಲಾಖೆಯಲ್ಲಿ ವೈದ್ಯಾಧಿಕಾರಿಗಳು, ತಜ್ಞರು, ದಂತ ವೈದ್ಯರು, ಲ್ಯಾಬ್ ಟೆಕ್ನಿಷಿಯನ್, ಫಾರ್ಮಸಿ, ನರ್ಸಿಂಗ್ ಅಧಿಕಾರಿಗಳು ಹಾಗೂ ಡಿ ಗ್ರೂಪ್ ನೌಕರರು ಸೇರಿದಂತೆ ಆರೋಗ್ಯ ಇಲಾಖೆಯಲ್ಲಿ ಮಂಜೂರಾದ ಹುದ್ದೆಗಳ ಒಟ್ಟು ಸಂಖ್ಯೆ 34,967ರಷ್ಟಿದ್ದು, ಇದರಲ್ಲಿ 20,444 ಹುದ್ದೆಗಳು ಭರ್ತಿಯಾಗಿವೆ. ಒಟ್ಟು 14,523 ಹುದ್ದೆಗಳು ಖಾಲಿಯಿದ್ದು ಹೊರಗುತ್ತಿಗೆ, ಸರ್ಕಾರಿ ಗುತ್ತಿಗೆ, ರಾಷ್ಟ್ರೀಯ ಆರೋಗ್ಯ ಮಿಷನ್ ಯೋಜನೆಯಡಿ ಹುದ್ದೆಗಳ ಕಾರ್ಯನಿರ್ವಹಣೆಯಾಗುತ್ತಿದೆ ಎಂದು ತಿಳಿಸಿದರು.

ಗ್ರಾಮೀಣ ಸೇವೆ ಕಡ್ಡಾಯ ಅಡಿ 2,371 ವೈದ್ಯರು ಸೇವೆ ಸಲ್ಲಿಸುತ್ತಿದ್ದಾರೆ. 204 ಕಿರಿಯ ಲ್ಯಾಬ್ ಟೆಕ್ನಿಷಿಯನ್ ಹುದ್ದೆ ಭರ್ತಿ ಪ್ರಕ್ರಿಯೆ ಚಾಲನೆಯಲ್ಲಿದೆ. 498 ಫಾರ್ಮಸಿ ಅಧಿಕಾರಿಗಳ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ. 705 ಹುದ್ದೆಗಳ ಭರ್ತಿ ಪ್ರಸ್ತಾವನೆ ಪರಿಶೀಲನೆಯಲ್ಲಿದೆ. ಖಾಲಿ ಇರುವ 10,253 ಡಿ ಗ್ರೂಪ್ ಹುದ್ದೆಗಳಲ್ಲಿ ಶೇ.75ರಷ್ಟು ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...