alex Certify ನಕಲಿ ವೈದ್ಯರ ಹಾವಳಿ ಬೇರು ಸಮೇತ ಕಿತ್ತೊಗೆಯಲು ಆರೋಗ್ಯ ಇಲಾಖೆ ಮಹತ್ವದ ಕ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಕಲಿ ವೈದ್ಯರ ಹಾವಳಿ ಬೇರು ಸಮೇತ ಕಿತ್ತೊಗೆಯಲು ಆರೋಗ್ಯ ಇಲಾಖೆ ಮಹತ್ವದ ಕ್ರಮ

ಬೆಂಗಳೂರು: ನಕಲಿ ವೈದ್ಯಕೀಯ ವೃತ್ತಿಯನ್ನು ಬೇರು ಸಮೇತ ಕಿತ್ತೊಗೆಯಲು ಆರೋಗ್ಯ ಇಲಾಖೆಯು ಆದೇಶ ಹೊರಡಿಸಿದೆ.

ಆರೋಗ್ಯ ಇಲಾಖೆಯ ಆದೇಶದ ಅನ್ವಯ ಖಾಸಗಿ ಆಸ್ಪತ್ರೆಗಳು, ಕ್ಲಿನಿಕ್’ಗಳು ತಮ್ಮ KPME ನೋಂದಣಿ ಸಂಖ್ಯೆ, ಆಸ್ಪತ್ರೆಯ ಹೆಸರು ಮತ್ತು ಮಾಲೀಕರ ಹೆಸರನ್ನು ಕಟ್ಟಡದ ಮುಂಭಾಗದಲ್ಲಿ ಪ್ರದರ್ಶಿಸವುದು ಕಡ್ಡಾಯವಾಗಿದೆ. ಇಷ್ಟೇ ಅಲ್ಲದೆ, ಅಲೋಪತಿ ಆಸ್ಪತ್ರೆಗಳು ನೀಲಿ ಬಣ್ಣ ಮತ್ತು ಆಯುರ್ವೇದಿಕ್ ಆಸ್ಪತ್ರೆಗಳು ಹಸಿರು ಬಣ್ಣದ ಬೋರ್ಡ್ ಬಳಸುವ ಮೂಲಕ ಬಣ್ಣ ಸಂಹಿತೆಯನ್ನು ಕಡ್ಡಾಯವಾಗಿ ಅನುಸರಿಸಬೇಕು.

ಖಾಸಗಿ ವೈದ್ಯಕೀಯ ಆಸ್ಪತ್ರೆಗಳು ಈ ನಿಯಮಗಳನ್ನು ಅನುಸರಿಸುವಲ್ಲಿ ವಿಫಲವಾದಲ್ಲಿ KPME ತಿದ್ದುಪಡಿ ಕಾಯಿದೆ 2017 ರ ಸೆಕ್ಷನ್ 19(5) ರ ಅನ್ವಯ ಕಠಿಣ ಕಾನೂನುಕ್ರಮ ಕೈಗೊಳ್ಳಲಾಗುವುದು. ಹೆಚ್ಚಿನ ವಿವರಗಳಿಗಾಗಿ ದಯವಿಟ್ಟು ಸುತ್ತೋಲೆಯನ್ನು ಪರಾಮರ್ಶಿಸಿ.

ನಕಲಿ ಮತ್ತು ಅರ್ಹತೆ ಹೊಂದಿಲ್ಲದ ವೈದ್ಯರು ಸಮಾಜಕ್ಕೆ ಕಂಟಕರಾಗಿದ್ದು ರೋಗಿಗಳ ಆರೋಗ್ಯದ ವಿಚಾರದಲ್ಲಿ ಚೆಲ್ಲಾಟವಾಡುತ್ತಿದ್ದಾರೆ. ನಮ್ಮ ಸರ್ಕಾರವು ರೋಗಿಗಳ ಸುರಕ್ಷತೆಗೆ ಮತ್ತು ಉತ್ತಮ ಆರೋಗ್ಯ ಸೇವೆ ಒದಗಿಸಲು ಬದ್ಧವಾಗಿದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

https://www.facebook.com/dineshgunduraoofficial/posts/989824015845441?ref=embed_post

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...