![](https://kannadadunia.com/wp-content/uploads/2023/03/d41586-020-00154-w_17918214.jpg)
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಅಂತ್ಯಕ್ರಿಯೆಗೆ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ. ಅಂತ್ಯಕ್ರಿಯೆಯಲ್ಲಿ ಭಾಗಿಯಾಗುವವರು ಮಾಸ್ಕ್, ಪಿಪಿಇ ಕಿಟ್ ಧರಿಸುವುದರ ಜೊತೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.
ಬಿಬಿಎಂಪಿ ಮತ್ತು ರಾಜ್ಯದ ಇತರೆ ಜಿಲ್ಲೆಗಳಲ್ಲಿ ಕೊರೊನಾ ಸೋಂಕಿತರ ಅಂತ್ಯಕ್ರಿಯೆಗೆ ಚಿತಾಗಾರ, ಸ್ಮಶಾನ ಮತ್ತು ರುದ್ರಭೂಮಿಗಳಲ್ಲಿ ಅವಕಾಶ ಮಾಡಿಕೊಡಬೇಕು.ಯಾವುದೇ ಕಾರಣಕ್ಕೂ ನಿರ್ಬಂಧ ಹೇರಬಾರದು ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಕೊರೊನಾ ಸೋಂಕಿತರ ಅಂತ್ಯಕ್ರಿಯೆಗೆ ಮಾಸ್ಕ್, ಕೈಗವಸು, ಪಿಪಿಇ ಕಿಟ್ ಧರಿಸುವುದರ ಜೊತೆಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.