ಬೆಂಗಳೂರು : ಆರೋಗ್ಯ ಇಲಾಖೆಯ ವ್ಯಾಪ್ತಿಯಲ್ಲಿ ಗುತ್ತಿಗೆ ಹಾಗೂ 1 ವರ್ಷ ಕಡ್ಡಾಯ ಸೇವೆ ನಿಯಮದಡಿ ಕೆಲಸ ಮಾಡುತ್ತಿರುವ ವೈದ್ಯರು ಆಧಾರ್ ಆಧರಿತ ಹಾಜರಿ ಹಾಕದಿದ್ದರೆ ವೇತನ ಪಾವತಿಸದಂತೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.
ಆರೋಗ್ಯ ಇಲಾಖೆಯು ಈ ಬಗ್ಗೆ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಿಗೆ ಸುತ್ತೋಲೆ ಹೊರಡಿಸಿದೆ.
ಕಡ್ಡಾಯ ಸೇವೆ ನಿಯಮದಡಿ ಕೆಲಸ ಮಾಡುತ್ತಿರುವ ಸಿಬ್ಬಂದಿಗಳು ಸಮಯಕ್ಕೆ ಸರಿಯಾಗಿ ಕಚೇರಿಗೆ ಬರುತ್ತಿಲ್ಲ ಎಂಬ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಹಾಜರಾತಿ ಹಾಕದವರಿಗೆ ವೇತನ ತಡೆಹಿಡಿಯಬೇಕು ಎಂದು ಸೂಚನೆ ನೀಡಲಾಗಿದೆ.