
ಬೆಂಗಳೂರು: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಸಂಘದ ನೇತೃತ್ವದಲ್ಲಿ ಮುಷ್ಕರ ಕೈಗೊಳ್ಳಲಾಗಿದೆ.
ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 30 ಸಾವಿರ ಗುತ್ತಿಗೆ, ಹೊರಗುತ್ತಿಗೆ ನೌಕರರು ಇಂದಿನಿಂದ ಮುಷ್ಕರ ಕೈಗೊಂಡಿದ್ದಾರೆ. ಸಮಾನ ವೇತನ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮುಷ್ಕರ ಕೈಗೊಳ್ಳಲಾಗಿದೆ. ಇಂದಿನಿಂದ ಕಪ್ಪು ಪಟ್ಟಿ ಧರಿಸಿ ಮುಷ್ಕರ ಕೈಗೊಳ್ಳಲಾಗುತ್ತದೆ. ಫೆಬ್ರವರಿ 21 ರಿಂದ ಧರಣಿ ನಡೆಸಲಾಗುವುದು ಎಂದು ಹೇಳಲಾಗಿದೆ.