ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 1500 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ ನೀಡಿದೆ.
1,205 ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ(ANM) ಮತ್ತು 300 ಆರೋಗ್ಯ ನಿರೀಕ್ಷಣಾಧಿಕಾರಿ(HIO) ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆ ಪಡೆಯಲಾಗಿದ್ದು, ಕರ್ನಾಟಕ ಲೋಕಸೇವಾ ಆಯೋಗ ಅಥವಾ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನೇಮಕಾತಿ ನಡೆಸಲಾಗುವುದು.
ಆರಂಭದಲ್ಲಿ ಈ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಬಹುದು. ಈ ಮೂಲಕ ಕಾಯಂ ನೇಮಕಾತಿಯ ಸಂದರ್ಭದಲ್ಲಿ ಕಾನೂನು ತೊಡಕು ಎದುರಾಗದಂತೆ ಎಚ್ಚರ ವಹಿಸಬೇಕು. ಕಾಯಂ ನೇಮಕಾತಿ ಸಂದರ್ಭದಲ್ಲಿ ಗುತ್ತಿಗೆ ನೌಕರಿ ಸೇವೆಯನ್ನು ಪರಿಗಣಿಸದೆ ವೃಂದ ಮತ್ತು ನೇಮಕಾತಿ ನಿಯಮಗಳ ಅನ್ವಯ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಮೆರಿಟ್ ಆಧಾರದ ಮೇಲೆ ನೇಮಕಾತಿ ನಡೆಸಬೇಕು ಎಂದು ಸೂಚನೆ ನೀಡಲಾಗಿದೆ.