alex Certify ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ದಾವಣಗೆರೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಡಿ ಬರುವ ವಿವಿಧ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಮೇ.17 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನೇರ ಸಂದರ್ಶನವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನಡೆಸಲಾಗುವುದು.

ಕೋವಿಡ್-19 ಸಾಂಕ್ರಾಮಿಕ ರೋಗದ ನಿರ್ವಹಣೆಗೆ ಅನುಕೂಲವಾಗುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲಿ ಖಾಲಿ ಇರುವ ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞ, ಫಾರ್ಮಸಿಸ್ಟ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಸೆ.30 ರವರೆಗೆ ತಾತ್ಕಾಲಿಕವಾಗಿ ನೇರ ಸಂದರ್ಶನದ ಮೂಲಕ ನೇಮಕ ಮಾಡಿಕೊಳ್ಳಲು ವೈದ್ಯಕೀಯ ಅಥವಾ ಅರೆ ವೈದ್ಯಕೀಯ ಸಿಬ್ಬಂದಿ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಶುಶ್ರೂಷಕರು 1 ಹುದ್ದೆ ಖಾಲಿ ಇದ್ದು ತಿಂಗಳಿಗೆ 25 ಸಾವಿರ ರೂ.ವೇತನವಿರುತ್ತದೆ. ಪ್ರಯೋಗಶಾಲಾ ತಂತ್ರಜ್ಞರ 2 ಹುದ್ದೆ ಖಾಲಿ ಇದ್ದು 20 ಸಾವಿರ ರೂ. ಹಾಗೂ ಫಾರ್ಮಸಿಸ್ಟ್ 16 ಹುದ್ದೆಗಳಿಗೆ 20 ಸಾವಿರ ರೂ. ವೇತನವಿರುತ್ತದೆ. ಅರ್ಹ ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ ಮೂಲ ದಾಖಲಾತಿಗಳು ಮತ್ತು ಪ್ರಮಾಣ ಪತ್ರಗಳೊಂದಿಗೆ ಹಾಗೂ ಒಂದು ಸೆಟ್ ದೃಢೀಕೃತ ಜೆರಾಕ್ಸ್ ಪ್ರತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು.

ಹಾಜರಾಗುವ ಅಭ್ಯರ್ಥಿಗಳು ನೇಮಕವಾಗುವ ಅಭ್ಯರ್ಥಿಗಳನ್ನು ಯಾವುದೇ ಕಾರಣಕ್ಕೂ ಸರ್ಕಾರಿ ಸೇವೆಯಲ್ಲಿ ಸಕ್ರಮಗೊಳಿಸುವುದಿಲ್ಲ. ಅಭ್ಯರ್ಥಿಗಳು ಅರೆವೈದ್ಯಕೀಯ ಮಂಡಳಿಯಿಂದ ಪಡೆದ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹಾಜರುಪಡಿಸುವುದು. ಶುಶ್ರೂಷಕರು ಇಲಾಖೆಯು ನಿಗದಿಪಡಿಸಿರುವ ವಿದ್ಯಾರ್ಹತೆ (ಬಿಎಸ್‍ಸಿ/ಜಿಎನ್‍ಎಂ ನರ್ಸಿಂಗ್) ಹೊಂದಿರಬೇಕು ಹಾಗೂ ಕರ್ನಾಟಕದಲ್ಲಿನ ನೊಂದಣಿ ಪ್ರಾಧಿಕಾರದಲ್ಲಿ ನೋಂದಣಿಯಾಗಿರಬೇಕು. ನೇಮಕಾತಿಗೊಂಡ ಅಭ್ಯರ್ಥಿಗಳು ಬಂಧ ಪತ್ರ ಹಾಗೂ ವೈದ್ಯಕೀಯ ಪ್ರಮಾಣ ಪತ್ರವನ್ನು ಸಲ್ಲಿಸುವ ಷರತ್ತಿಗೆ ಒಳಪಟ್ಟಿರುತ್ತಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗರಾಜ್ ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...