
ಬೆಳಗಾವಿ: ರಾಜ್ಯದ ಎಲ್ಲಾ ತಾಲೂಕುಗಳಿಗೂ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ವಿಸ್ತರಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಠಾತ್ ಹೃದಯಘಾತದಿಂದ ಸಾವು ಸಂಭವಿಸುವುದನ್ನು ತಡೆಯಲು ನೆರವಾಗುವ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು ಎಲ್ಲ ತಾಲೂಕುಗಳಿಗೆ ವಿಸ್ತರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಹೃದಯಾಘಾತ ಸಂಭವಿಸಿದ ಸಂದರ್ಭದಲ್ಲಿ ಪ್ರಾಣ ಹಾನಿ ತಡೆಗೆ ಜೀವ ರಕ್ಷಕ ಚುಚ್ಚುಮದ್ದು ಇದ್ದು, ಇದನ್ನು ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಯಡಿ ಜಿಲ್ಲಾ ಆಸ್ಪತ್ರೆಗಳಲ್ಲಿ ನೀಡಲು ವ್ಯವಸ್ಥೆ ಮಾಡಲಾಗಿದೆ. ತಾಲೂಕು ಆಸ್ಪತ್ರೆಗಳಲ್ಲಿಯೂ ಶೀಘ್ರವೇ ಇದು ಲಭ್ಯವಾಗಲಿದೆ ಎಂದು ಹೇಳಿದ್ದಾರೆ.