alex Certify ಸರ್ಕಾರಿ ನೌಕರರು, ಕುಟುಂಬದವರಿಗೆ ಗುಡ್ ನ್ಯೂಸ್: ಹೊಸ ವರ್ಷದಿಂದಲೇ ಕ್ಯಾಶ್ಲೆಸ್ ಚಿಕಿತ್ಸೆ ಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ನೌಕರರು, ಕುಟುಂಬದವರಿಗೆ ಗುಡ್ ನ್ಯೂಸ್: ಹೊಸ ವರ್ಷದಿಂದಲೇ ಕ್ಯಾಶ್ಲೆಸ್ ಚಿಕಿತ್ಸೆ ಜಾರಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದವರಿಗೆ ಹೊಸ ವರ್ಷದಿಂದ ಕ್ಯಾಶ್ ಲೆಸ್ ಚಿಕಿತ್ಸೆ ಸೌಲಭ್ಯ ಸಿಗಲಿದೆ.

ರಾಜ್ಯದ 888 ಆಸ್ಪತ್ರೆಗಳಲ್ಲಿ ನಗದು ರಹಿತವಾಗಿ ರಾಜ್ಯದ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದವರು ವೈದ್ಯಕೀಯ ಸೇವೆ ಪಡೆದುಕೊಳ್ಳಬಹುದು. ಮಾರಣಾಂತಿಕ ಕಾಯಿಲೆ ಸೇರಿ 1,226 ಆರೋಗ್ಯ ಸಮಸ್ಯೆಗಳಿಗೆ ಸೂಪರ್ ಸ್ಪೆಷಾಲಿಟಿ, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಸಂಪೂರ್ಣ ನಗದು ರಹಿತ ಚಿಕಿತ್ಸೆ ಸೌಲಭ್ಯ ಕಲ್ಪಿಸಲಿದ್ದು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಉಚಿತ ಆರೋಗ್ಯ ಯೋಜನೆ ಹೊಸ ವರ್ಷದಿಂದ ಜಾರಿಗೆ ಬರಲಿದೆ.

ಸರ್ಕಾರಿ ನೌಕರರು ಮತ್ತು ಕುಟುಂಬದವರು ಮಾರಣಾಂತಿ ಕಾಯಿಲೆ, ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ಪಡೆದುಕೊಳ್ಳಲು ಮಾಡಿದ ವೆಚ್ಚ ಮರುಪಾವತಿಗೆ ಹರಸಾಹಸ ಪಡಬೇಕಿತ್ತು, ಚಿಕಿತ್ಸೆಗೆ ನಿಗದಿಪಡಿಸಿದ್ದ ಮೊತ್ತ ಕೂಡ ಕಡಿಮೆ ಇತ್ತು. ಈ ಹಿನ್ನೆಲೆಯಲ್ಲಿ ನೌಕರರ ಸಂಘ ನಡೆಸಿದ ನಿರಂತರ ಪ್ರಯತ್ನದ ಫಲವಾಗಿ ರಾಜ್ಯ ಸರ್ಕಾರ ರಾಜ್ಯ ಸರ್ಕಾರಿ ನೌಕರರ ಉಚಿತ ಆರೋಗ್ಯ ಯೋಜನೆಗೆ ಸರ್ಕಾರ ಅಂಗೀಕಾರ ನೀಡಿದ್ದು, ಹೊಸ ವರ್ಷ ಜನವರಿಯಿಂದ ನೌಕರ ಸ್ನೇಹ ಆರೋಗ್ಯ ಯೋಜನೆ ಜಾರಿಯಾಗಲಿದೆ.

ಸರ್ಕಾರಿ ನೌಕರರು ಮತ್ತು ಅವರ ಕುಟುಂಬದವರಿಗೆ ನಗದು ರಹಿತ ಚಿಕಿತ್ಸೆ ಸೌಲಭ್ಯ ಸಿಗಲಿದೆ. ನಿವೃತ್ತ ನೌಕರರಿಗೂ ನಗದು ರಹಿತ ಚಿಕಿತ್ಸೆ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಮಾಹಿತಿ ನೀಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...