ರಾಮನಗರ: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಸಾಲು ಸಾಲು ಹೃದಯಾಘಾತ ಪ್ರಕರಣಗಳು ನಡೆದಿದ್ದು, ಆತಂಕಕ್ಕೆ ಕಾರಣವಾಗಿದೆ. ರಾಯಚೂರಿನಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಹೃದಯಾಘಾತದಿಂದ ಸಾವನ್ನಪ್ಪಿದ ಬೆನ್ನಲ್ಲೇ ಸಹಾಯಕ ಶಿಕ್ಷಕರೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ್ದ ಘಟನೆ ಬೆಳಕಿಗೆ ಬಂದಿತ್ತು. ಇದೀಗ ಅಟೆಂಡರ್ ಒಬ್ಬರು ಕಚೇರಿಯಲ್ಲಿ ಕುಳಿತ ಬಂಗಿಯಲ್ಲೇ ಕೊನೆಯುಸಿರೆಳೆದಿರುವ ಘಟನೆ ನಡೆದಿದೆ.
ರಾಮನಗರ ಪಟ್ಟಣದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಅಟೆಂಡರ್ ಕುಳಿತಲ್ಲೇ ಹೃದಯಾಘತದಿಂದ ಸಾವನ್ನಪ್ಪಿದ್ದಾರೆ. ಬೂದನಗುಪ್ಪೆ ನಿವಾಸಿ 36 ವರ್ಷದ ಮಧು ಮೃತರು.
ಚೇರ್ ನಲ್ಲಿ ಕುಳಿತುಕೊಂಡಿದ್ದ ಮಧು ಇದ್ದಕ್ಕಿದ್ದಂತೆ ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಐಜೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.