
ರಾಮನಗರ: ಊಟ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಸರ್ಕಾರಿ ನೌಕರರೊಬ್ಬರು ಕಚೇರಿಯಲ್ಲಿಯೇ ಸಾವನ್ನಪ್ಪಿದ ಘಟನೆ ರಾಮನಗರದಲ್ಲಿ ನಡೆದಿದೆ.
45 ವರ್ಷದ ಯೋಗೇಶ್ ಮೃತ ದುರ್ದೈವಿ. ರಾಮನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿ ಗ್ರೂಪ್ ನೌಕರನಾಗಿ ಕಾರ್ಯನಿರ್ವಹಿಸುತ್ತಿದ್ದರು.
ಚನ್ನಪಟ್ಟಣ ಮೂಲದ ಯೋಗೇಶ್ ರಾಮನಗರದ ಡಿಸಿ ಕಚೇರಿಯಲ್ಲಿ ಡಿ ಗ್ರೂಪ್ ನೌಕರನಾಗಿ ಕೆಲಸ ಮಾಡುತ್ತಿದ್ದರು. ಕಚೇರಿಯಲ್ಲಿ ಮಧ್ಯಾಹ್ನ ಊಟ ಮಾಡುತ್ತಿದ್ದ ವೇಳೆ ಯೋಗೇಶ್ ಗೆ ಇದ್ದಕ್ಕಿದ್ದಂತೆ ಹೃದಯಘಾತವಾಗಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಯೋಗೇಶ್ ಮೃತದೇಹ ರಾಮನಗರ ಸರ್ಕಾರಿ ಆಸ್ಪತ್ರೆಯಲ್ಲಿ ಇರುವುದಾಗಿ ತಿಳಿದುಬಂದಿದೆ.