ಬೆಂಗಳೂರು: ಹೃದಯಾಘಾತದಿಂದ ಪ್ರತಿಭಟನಾನಿರತ ವ್ಯಕ್ತಿ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆಯಲ್ಲಿ ನಡೆದಿದೆ.
ದಲಿತ ಸಂಘರ್ಷ ಸಮಿತಿ ವತಿಯಿಂದ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಡಿಎಸ್ಎಸ್ ಧರಣಿಯಲ್ಲಿ ಭಾಗವಹಿಸಿದ್ದ ಮಾಚವಲಹಳ್ಳಿ ನಿವಾಸಿ ನರಸಿಂಹಪ್ಪ(65) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.