alex Certify BREAKING NEWS: ಬಾತ್ ರೋಮ್ ನಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿದ ಅಬಕಾರಿ SI | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬಾತ್ ರೋಮ್ ನಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿದ ಅಬಕಾರಿ SI

ಕಾರವಾರ: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಅಬಕಾರಿ ಎಸ್ ಐ ಓರ್ವರು ಬಾತ್ ರೂಮ್ ಗೆ ಹೋಗಿದ್ದಾಗ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ನಡೆದಿದೆ.

ಪುರುಷೋತ್ತಮ (58) ಹೃದಯಾಘಾತದಿಂದ ಮೃತಪಟ್ಟವರು. ಪುರುಷೋತ್ತಮ ಅಂಕೋಲಾ ಅಬಕಾರಿ ಎಸ್ ಐ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಸ್ನಾನಕ್ಕೆಂದು ಬಾತ್ ರೂಮ್ ಗೆ ಹೋಗಿದ್ದ ಪುರುಷೋತ್ತಮ್, ಪ್ರಜ್ಞೆ ತಪ್ಪಿ ಬಿದ್ದಿದ್ದರು. ಇದನ್ನು ಗಮನಿಸಿದ ಕುಟುಂಬದವರು ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದರು.

ತಪಾಸಣೆ ನಡೆಸಿದ ವೈದ್ಯರು ಆಸ್ಪತೆಗೆ ಬರುವ ಮೊದಲೇ ಪುರುಷೋತ್ತಮ್ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...