ಬಾಗಲಕೋಟೆ: ಚುನಾವಣಾ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳದ ಬಸ್ ನಿಲ್ದಾಣದ ಬಳಿ ನಡೆದಿದೆ.
ಗೋವಿಂದಪ್ಪ ಸಿದ್ದಾಪುರ ಮೃತ ಚುನಾವಣಾ ಸಿಬ್ಬಂದಿ. ಬಿದರಿ ಸರ್ಕಾರಿ ಶಾಲೆಯ ಶಿಕ್ಷಕರಾಗಿದ್ದ ಗೋವಿಂದಪ್ಪ ಸಿದ್ದಾಪುರ ಚುನಾವಣಾ ಕರ್ತವ್ಯಕ್ಕೆ ನೇಮಕಗೊಂಡಿದ್ದರು.
ಈ ಹಿನ್ನೆಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆಂದು ಮೈಗೂರು ಪ್ರಾಥಮಿಕ ಶಾಲೆಯ ಮತಗಟ್ಟೆಗೆ ತೆರಳುತ್ತಿದ್ದಾಗ ಏಕಾಏಕಿ ಹೃದಯಾಘಾತ ಸಂಭವಿಸಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.