alex Certify BIG NEWS: ಶಾಲೆಯಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿದ ಶಿಕ್ಷಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಾಲೆಯಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿದ ಶಿಕ್ಷಕ

ಶಿವಮೊಗ್ಗ: ಶಿಕ್ಷಕರೊಬ್ಬರು ಶಾಲೆಯಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಪ್ರೌಢಶಾಲೆಯಲ್ಲಿ ನಡೆದಿದೆ.

ಗಜಾನನ ಹಿರೇಮಠ ಮೃತ ಶಿಕ್ಷಕ. ಚಿತ್ರಕಲಾ ಶಿಕ್ಷಕರಾಗಿದ್ದ ಗಜಾನನ ಹಿರೇಮಠ, ಎಂದಿನಂತೆ ವಿದ್ಯಾರ್ಥಿಗಳಿಗೆ ವಾಲಿಬಾಲ್ ಆಟದ ಬಗ್ಗೆ ತರಬೇತಿ ನೀಡುತ್ತಿದ್ದರು. ಈ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಷ್ಟರಲ್ಲೇ ಶಿಕ್ಷಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಶಿಕ್ಷಕ ಗಜಾನನ ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ. ಮೆಚ್ಚಿನ ಶಿಕ್ಷಕನ ಅಗಲಿಕೆಗೆ ವಿದ್ಯಾರ್ಥಿಗಳು ಕಂಬನಿ ಮಿಡಿದಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...