alex Certify ಪ್ರವಾಸಿಗರು ಕೆಳಗಿಳಿಯುತ್ತಿದ್ದಂತೆ ಹೃದಯಾಘಾತದಿಂದ ಟಿಟಿ ಚಾಲಕ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರವಾಸಿಗರು ಕೆಳಗಿಳಿಯುತ್ತಿದ್ದಂತೆ ಹೃದಯಾಘಾತದಿಂದ ಟಿಟಿ ಚಾಲಕ ಸಾವು

ಚಿಕ್ಕಮಗಳೂರು: ಪ್ರವಾಸಿಗರು ವಾಹನದಿಂದ ಕೆಳಗಿಳಿಯುತ್ತಿದ್ದಂತೆ ಟಿಟಿ ವಾಹನ ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ತಾಲೂಕಿನ ಮಲ್ಲಂದೂರಿನಲ್ಲಿ ಭಾನುವಾರ ನಡೆದಿದೆ.

ಬೆಂಗಳೂರಿನ ಸೋಮನಹಳ್ಳಿ ಮೂಲದ ಅವಿನಾಶ್(25) ಮೃತಪಟ್ಟ ಚಾಲಕ. ಅವರು ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಪ್ರವಾಸಿಗರನ್ನು ಕರೆತಂದಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಮಲ್ಲಂದೂರು ಸಮೀಪ ಹೋಸ್ಟೇಯೊಂದಕ್ಕೆ ಪ್ರವಾಸಿಗರನ್ನು ಕರೆತಂದಿದ್ದು, ಟಿಟಿಯಿಂದ ಪ್ರವಾಸಿಗರು ಕೆಳಗಿಳಿದ ನಂತರ ಅವಿನಾಶ್ ಅವರಿಗೆ ಹೃದಯಘಾತವಾಗಿದೆ. ಕುಸಿದು ಬಿದ್ದು ಅವರು ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...