
ಹುಬ್ಬಳ್ಳಿ: ಬೈಕ್ ನಲ್ಲಿ ತೆರಳುತ್ತಿದ್ದ ಯುವಕ ಏಕಾಏಕಿ ಹೃದಯಾಘಾತದಿಂದ ಕೆಳಗೆ ಬಿದ್ದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹುಬ್ಬಳ್ಳಿ-ಧಾರವಾಡ ರಸ್ತೆಯಲ್ಲಿ ಕಿಮ್ಸ್ ಆಸ್ಪತ್ರೆ ಬಳಿಯೇ ಈ ಘಟನೆ ನಡೆದಿದೆ. ಮುಸ್ತಾಕ್ ಎಂಬ ಯುವಕ ತಡರಾತ್ರಿ ಬೈಕ್ ಓಡಿಸಿಕೊಂಡು ಹೋಗುತ್ತಿದ್ದಾಗ ಹೃದಯಾಘಾತದಿಂದ ಬೈಕ್ ನಿಂದ ಕೆಳಗೆ ಬಿದ್ದಿದ್ದಾನೆ. ಎದೆ ಹಿಡಿದುಕೊಂಡು ರಸ್ತೆಯಲ್ಲಿಯೇ ನರಳಾಡುತ್ತಿದ್ದ. ಈ ವೇಳೆ ಅದೇ ಮಾರ್ಗವಾಗಿ ಬಂದ ಹುಬ್ಬಳ್ಳಿ-ಧಾರವಾಡ ಸಂಚಾರ ಠಾಣೆ ಇನ್ಸ್ ಪೆಕ್ಟರ್ ಡಿಸೋಜ, ಯುವಕನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಮಾನವೀಯಎ ಮೆರೆದಿದ್ದಾರೆ.
ಕಿಮ್ಸ್ ಆಸ್ಪತ್ರೆಯಲ್ಲಿ ಯುವಕನಿಗೆ ಚಿಕಿತ್ಸೆ ಮುಂದುವರೆದಿದೆ. ಇತ್ತೀಚಿನ ದಿನಗಳಲ್ಲಿ ಹೃದಯಾಘಾತಕ್ಕೀದಾಗುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.