ಚಾಮರಾಜನಗರ : ಮಕ್ಕಳಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿದ್ದು, ತೀವ್ರ ಹೃದಯಾಘಾತದಿಂದ 3 ನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಚಾಮರಾಜನಗರದ ಸೇಂಟ್ ಫ್ಯಾನ್ಸಿಸ್ ಶಾಲೆಯಲ್ಲಿ ನಡೆದಿದೆ.
ಶಿಕ್ಷಕಿಗೆ ನೋಟ್ಸ್ ತೋರಿಸುವಾಗ ವಿದ್ಯಾರ್ಥಿನಿ ತೇಜಸ್ವಿನಿ ಏಕಾಏಕಿ ಕುಸಿದು ಬಿದ್ದಿದ್ದಾಳೆ. ನಂತರ ಕೂಡಲೇ ಜೆಎಸ್ ಎಸ್ ಆಸ್ಪತ್ರೆಗೆ ದಾಖಲಿಸಿದರೂ ಅಷ್ಟರಲ್ಲೇ ಬಾಲಕಿ ಮೃತಪಟ್ಟಿದ್ದಳು ಎಂದು ತಿಳಿದು ಬಂದಿದೆ.
ಬಾಲಕಿ ಕುಸಿದು ಬಿದ್ದಾಗ ಆಕೆ ಮೂತ್ರ ವಿಸರ್ಜಿಸಿದ್ದಳು. ತಕ್ಷಣ ಶಾಲಾ ಸಿಬ್ಬಂದಿಗಳು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಷ್ಟರಲ್ಲೇ ಬಾಲಕಿ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಮಗಳ ಸಾವಿನ ಹಿನ್ನೆಲೆ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಚಿಕ್ಕ ಚಿಕ್ಕ ಮಕ್ಕಳಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ.