alex Certify SHOCKING: ಕಾದ ಕಾವಲಿಯಂತಾದ ಕರ್ನಾಟಕ: 11 ಜಿಲ್ಲೆಗಳಲ್ಲಿ 40 ಡಿಗ್ರಿ ದಾಟಿದ ತಾಪಮಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಕಾದ ಕಾವಲಿಯಂತಾದ ಕರ್ನಾಟಕ: 11 ಜಿಲ್ಲೆಗಳಲ್ಲಿ 40 ಡಿಗ್ರಿ ದಾಟಿದ ತಾಪಮಾನ

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ತಾಪ ತೀವ್ರ ಏರಿಕೆಯಾಗುತ್ತಿದ್ದು, 11 ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ದಾಟಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಜಿಲ್ಲೆಗಳಲ್ಲಿ ಭಾರಿ ಪ್ರಮಾಣದ ಬಿಸಿ ತಟ್ಟಲಿದೆ ಎಂದು ಹೇಳಲಾಗಿದೆ.

ಕಲಬುರಗಿ, ರಾಯಚೂರು ಜಿಲ್ಲೆಗಳಲ್ಲಿ 42 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಉತ್ತರ ಕರ್ನಾಟಕದ 11 ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ಗಿಂತ ಹೆಚ್ಚು ದಾಖಲಾಗಿದೆ. ಯಾದಗಿರಿಯಲ್ಲಿ 41.8, ವಿಜಯಪುರದಲ್ಲಿ 40.9, ಬಳ್ಳಾರಿ, ವಿಜಯನಗರದಲ್ಲಿ 40.7 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಏಪ್ರಿಲ್ 3ರಿಂದ 5ರವರೆಗೆ ಬಾಗಲಕೋಟೆ, ಕಲಬುರಗಿ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಉಷ್ಣ ಅಲೆ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲವು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾದ ವರದಿಯಾಗಿದೆ. ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಇರಲಿದ್ದು, ಬಾಗಲಕೋಟೆ, ಬೆಳಗಾವಿ, ವಿಜಯಪುರ ಹಲವೆಡೆ ಗುಡುಗು, ಮಿಂಚು ಸಾಧ್ಯತೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...