
ಬೆಂಗಳೂರು: ರಾಜ್ಯದ 4 ಜಿಲ್ಲೆಗಳಲ್ಲಿ ಉಷ್ಣ ಅಲೆಯ ಮುನ್ನೆಚ್ಚರಿಕೆ ನೀಡಲಾಗಿದೆ. ಬಳ್ಳಾರಿ, ವಿಜಯಪುರ, ಬಾಗಲಕೋಟೆ, ಕಲಬುರಗಿ ಜಿಲ್ಲೆಗಳಲ್ಲಿ ಉಷ್ಣಾಂಶ ಭಾರಿ ಏರಿಕೆಯಾಗಲಿದೆ. ತಾಪಮಾನ ಎರಡರಿಂದ ಮೂರು ಡಿಗ್ರಿಯಷ್ಟು ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ವಿಜಯಪುರ, ಬಾಗಲಕೋಟೆ, ಕಲಬುರಗಿ, ಬಳ್ಳಾರಿ ಜಿಲ್ಲೆಗಳಲ್ಲಿ ಗರಿಷ್ಟ ಉಷ್ಣಾಂಶದಲ್ಲಿ ಭಾರಿ ಹೆಚ್ಚಳವಾಗಿರುವುದರಿಂದ ಉಷ್ಣ ಅಲೆ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮಳೆ ಕೊರತೆಯಿಂದ ವಾತಾವರಣದಲ್ಲಿ ತೇವಾಂಶ ಕಡಿಮೆಯಾಗಿ ಗರಿಷ್ಠ ಉಷ್ಣಾಂಶದಲ್ಲಿ ಭಾರಿ ಹೆಚ್ಚಳವಾಗಿದ್ದು. ವಾಡಿಕೆಗಿಂತ ಎರಡರಿಂದ ಮೂರು ಡಿಗ್ರಿ ಸೆಲ್ಸಿಯಸ್ ವರೆಗೆ ಉಷ್ಣಾಂಶ ಹೆಚ್ಚಳವಾಗುತ್ತದೆ ಎನ್ನಲಾಗಿದೆ.
ಉತ್ತರ ಒಳನಾಡು ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ಗಡಿಗೆ ತಲುಪಿದೆ. ಉತ್ತರ ಒಳನಾಡು ಕೆಲ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಕೆಲವು ಕಡೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ.