
ರಾಯಚೂರು: ರಾಯಚೂರು ತಾಲೂಕಿನ ಜಾಲಿಬೆಂಚಿ ಗ್ರಾಮದಲ್ಲಿ ಭಾರಿ ಬಿಸಿಲಿನ ತಾಪದಿಂದಾಗಿ ಜಮೀನು ಕೆಲಸಕ್ಕೆ ಹೋಗಿದ್ದ ರೈತರೊಬ್ಬರು ಮೃತಪಟ್ಟಿದ್ದಾರೆ.
ಹನುಮಂತು(45) ಮೃತಪಟ್ಟವರು ಎಂದು ಹೇಳಲಾಗಿದೆ. ಹೊಲದಿಂದ ಬಣವೆ ಕೆಲಸ ಮುಗಿಸಿಕೊಂಡು ಮನೆಯ ಬಳಿ ಬಂದ ಹನುಮಂತು ನೀರು ಕುಡಿಯುತ್ತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಭಾರಿ ಬಿಸಿಲ ಕಾರಣ ಬಳಲಿದ್ದ ಅವರು ಏಕಾಏಕಿ ಮೃತಪಟ್ಟಿದ್ದಾರೆ. ಹನುಮಂತು ಅವರ ಹಠಾತ್ ಸಾವಿನಿಂದ ಕುಟುಂಬದವರು ಕಂಗಾಲಾಗಿದ್ದಾರೆ. ಯರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.