ಬೆಂಗಳೂರು: ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆ ಹೊರತುಪಡಿಸಿ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಬಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದ್ದು, ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ. ಸಮುದ್ರದಲ್ಲಿ 50 ಕಿಲೋಮೀಟರ್ ವರೆಗೂ ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಕರಾವಳಿ ಭಾಗದಲ್ಲಿ ಮಳೆಯ ಆರ್ಭಟ ಸೋಮವಾರಕ್ಕೆ ಹೋಲಿಸಿದರೆ ಮಂಗಳವಾರ ಸ್ವಲ್ಪ ಕಡಿಮೆಯಾದರೂ ಬಿರುಗಾಳಿ ಸಹಿತ ಭಾರಿ ಮಳೆ ಆಗುವ ಸಂಭವ ಇದೆ. ಕರಾವಳಿ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಮಲೆನಾಡಿನ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿಯೂ ಹೆಚ್ಚಿನ ಮಳೆಯಾಗುವ ಸಂಭವ ಇದೆ.