alex Certify ರಾಜ್ಯದಲ್ಲಿ ಇನ್ನೂ 4 ದಿನ ಭಾರಿ ಮಳೆ ಮುನ್ಸೂಚನೆ: 9 ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಇನ್ನೂ 4 ದಿನ ಭಾರಿ ಮಳೆ ಮುನ್ಸೂಚನೆ: 9 ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಣೆ

ಬೆಂಗಳೂರು: ರಾಜ್ಯಾದ್ಯಂತ ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆ ಮುಂದುವರೆಯಲಿದೆ. 9 ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ನೈರುತ್ಯ ಮುಂಗಾರು ರಾಜ್ಯದ ಬಹುತೇಕ ಭಾಗದಲ್ಲಿ ಅಬ್ಬರಿಸುತ್ತಿದೆ. ರಾಜ್ಯದಾದ್ಯಂತ ಮುಂದಿನ ನಾಲ್ಕು ದಿನ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜುಲೈ 26ರಂದು ಬೀದರ್, ಕಲಬುರಗಿ, ಉಡುಪಿ, ಬೆಳಗಾವಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.

ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ಹಾಸನ, ಯಾದಗಿರಿ, ರಾಯಚೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಜುಲೈ 27ರಂದು ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಬೆಳಗಾವಿ, ವಿಜಯಪುರ, ದಕ್ಷಿಣ ಕನ್ನಡ, ಹಾಸನ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ ನಾಲ್ಕು ದಿನ ಬೆಂಗಳೂರು ನಗರ ಗ್ರಾಮಾಂತರ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...