ಬೆಂಗಳೂರು: ಕರಾವಳಿ ಮಲೆನಾಡಿನಲ್ಲಿ ಇಂದು ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ ದಕ್ಷಿಣ ಕನ್ನಡ, ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ ಮತ್ತು ಕೋಲಾರ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ.
ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರಿ ಗಾಳಿ ಮಳೆಯ ಸಾಧ್ಯತೆ ಹಿನ್ನೆಲೆಯಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಇಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಾಮರಾಜನಗರ, ಚಿತ್ರದುರ್ಗ, ತುಮಕೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹೇಳಲಾಗಿದೆ.