ಬೆಂಗಳೂರು: ಹವಾಮಾನ ಇಲಾಖೆಯಿಂದ ಭಾರೀ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದ್ದು, ನಾಲ್ಕು ದಿನ ಆರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
ಮುಂದಿನ ನಾಲ್ಕು ದಿನ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಆರು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜುಲೈ 4ರಿಂದ 7ರವರೆಗೆ ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜುಲೈ 6ರಂದು ಮೈಸೂರು, ಚಿತ್ರದುರ್ಗ, ಕಲಬುರ್ಗಿ, ಯಾದಗಿರಿ, ಹಾಸನ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಬೆಳಗಾವಿ, ಬೀದರ್, ಬಾಗಲಕೋಟೆ, ಗದಗ, ಧಾರವಾಡ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರಿನಲ್ಲಿ ಮುಂದಿನ ಎರಡು ದಿನ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯಾದ್ಯಂತ ಮುಂಗಾರು ಮಾರುತ ವ್ಯಾಪಿಸಿದ್ದು, ಮೋಡ ಕವಿದ ವಾತಾವರಣ ಕಂಡು ಬಂದಿದೆ. ಕೆಲವೆಡೆ ಧಾರಾಕಾರ ಮಳೆಯಾಗಿದ್ದು, ಮತ್ತೆ ಕೆಲವು ಕಡೆ ಮಳೆ ಆಗಿಲ್ಲ.