alex Certify ಅಮರನಾಥದಲ್ಲಿ ಭಾರಿ ಮಳೆ, ಗುಡ್ಡ ಕುಸಿತ: ಸಂಕಷ್ಟದಲ್ಲಿ 80 ಕನ್ನಡಿಗರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಮರನಾಥದಲ್ಲಿ ಭಾರಿ ಮಳೆ, ಗುಡ್ಡ ಕುಸಿತ: ಸಂಕಷ್ಟದಲ್ಲಿ 80 ಕನ್ನಡಿಗರು

ಅಮರನಾಥ ಯಾತ್ರೆಗೆ ತೆರಳುವ ಮಾರ್ಗ ಮಧ್ಯೆ ಭಾರಿ ಮಳೆಯಿಂದಾಗಿ ಗುಡ್ಡ ಕುಸಿತ ಉಂಟಾಗಿದ್ದು, ಕರ್ನಾಟಕದ 80 ಯಾತ್ರಾರ್ಥಿಗಳು ಮಾರ್ಗ ಮಧ್ಯೆ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಸಂಕಷ್ಟದಲ್ಲಿರುವ ತಮ್ಮನ್ನು ರಕ್ಷಣೆ ಮಾಡಿ ಸುರಕ್ಷಿತವಾಗಿ ಊರಿಗೆ ತೆರಳಲು ವ್ಯವಸ್ಥೆ ಮಾಡುವಂತೆ ವಿಡಿಯೋ ಮೂಲಕ ಪ್ರಧಾನಿ ಮೋದಿಯವರಿಗೆ ಮನವಿ ಮಾಡಿದ್ದಾರೆ.

ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಂದ ಜುಲೈ 4ರಂದು ಅಮರನಾಥ ದರ್ಶನಕ್ಕೆ ತೆರಳಿದ್ದರು. ದರ್ಶನ ಪಡೆದು ಶುಕ್ರವಾರ ವಾಪಸ್ ತೆರಳುವ ಸಂದರ್ಭದಲ್ಲಿ ಭಾರಿ ಮಳೆಯಿಂದಾಗಿ ಮಾರ್ಗಮಧ್ಯೆ ಗುಡ್ಡ ಕುಸಿತವಾಗಿದೆ. ಬೇಸ್ ಕ್ಯಾಂಪ್ ನಲ್ಲಿ ಆಶ್ರಯ ಪಡೆದು ಯಾತ್ರೆಗಳು ಸುರಕ್ಷಿತವಾಗಿದ್ದಾರೆ.

ಜಮ್ಮು ಕಾಶ್ಮೀರ ಪ್ರದೇಶದಲ್ಲಿ ಭಾರಿ ಮಳೆ ಗುಡ್ಡ ಕುಸಿತ ಕಾರಣ ಅಮರನಾಥ ಯಾತ್ರೆಯನ್ನು ಎರಡು ದಿನಗಳಿಂದ ಸ್ಥಗಿತಗೊಳಿಸಲಾಗಿದೆ. ಬೇಸ್ ಕ್ಯಾಂಪ್ ಗಳಲ್ಲಿ 50,000 ಯಾತ್ರಾರ್ಥಿಗಳು ಸಿಲುಕಿದ್ದಾರೆ.

ಕನ್ನಡಿಗ ಯಾತ್ರಾರ್ಥಿಗಳು ಸುರಕ್ಷಿತವಾಗಿದ್ದು, ಅವರೆಲ್ಲರನ್ನು ಸುರಕ್ಷಿತವಾಗಿ ಕರೆತರಲು ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಅವರಿಗೆ ಕನ್ನಡಿಗರ ರಕ್ಷಣೆಯ ಜವಾಬ್ದಾರಿ ವಹಿಸಲಾಗಿದೆ. ಉತ್ತರಾಖಂಡ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗಿದೆ ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...