
ಬೆಂಗಳೂರು: ರಾಜ್ಯದ ಹಲವೆಡೆ ಹಿಂಗಾರು ಮಳೆ ಆರ್ಭಟಿಸುತ್ತಿದ್ದು, ಶಿವಮೊಗ್ಗ, ಭದ್ರಾವತಿ, ಎನ್.ಆರ್. ಪುರ, ಚಿಕ್ಕಮಗಳೂರು ಸೇರಿ ಹಲವೆಡೆ ಧಾರಾಕಾರ ಮಳೆಯಾಗಿದೆ.
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ಸತತ ಎರಡು ಗಂಟೆಗಳಿಂದ ಧಾರಾಕಾರ ಮಳೆಯಾಗುತ್ತಿದೆ. ಕೊಟ್ಟಿಗೆಹಾರ, ಬಾಳೂರು, ಬನಕಲ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಳೆಯ ಅರ್ಭಟಕ್ಕೆ ಚಾರ್ಮಾಡಿ ಘಾಟ್ ನಲ್ಲಿ ಗುಡ್ಡ ಕುಸಿತ ಉಂಟಾಗಿದೆ.
ರಸ್ತೆಯ ಮೇಲೆ ನದಿಯಂತೆ ಮಳೆಯ ನೀರು ಹರಿಯುತ್ತಿದೆ, ಚಾರ್ಮಾಡಿ ಘಾಟ್ ನಲ್ಲಿ ಮಳೆ, ಗುಡ್ಡ ಕುಸಿತದಿಂದಾಗಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ. ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದು, ಸವಾರರು ಪರದಾಟ ನಡೆಸಿದ್ದಾರೆ.