ಬೆಂಗಳೂರು: ರಾಜ್ಯಾದ್ಯಂತ ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜಧಾನಿ ಬೆಂಗಳೂರಿನಲ್ಲಿ ಇನ್ನು ಎರಡು ದಿನ ಭಾರೀ ಮಳೆಯಾಗಲಿದೆ.
ಅದೇ ರೀತಿ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ, ಮಲೆನಾಡು ಭಾಗದ ಶಿವಮೊಗ್ಗ, ಕೊಡಗು, ಹಾಸನ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.