
ಬೆಂಗಳೂರು: ರಾಜ್ಯಾದ್ಯಂತ ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳು ಮತ್ತು ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಶಾಹೀನ್ ಚಂಡಮಾರುತದ ಪ್ರಭಾವದಿಂದ ರಾಜ್ಯಾದ್ಯಂತ ಇನ್ನು ಮೂರು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅ. 5 ರಂದು ಕರಾವಳಿಯ ಉಡುಪಿ, ಉತ್ತರಕನ್ನಡ ಮತ್ತು ದಕ್ಷಿಣಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದ್ದು, ಅ. 6 ರಂದು ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳಿಗೆ ಆಗಸ್ಟ್ 6 ರಂದು ಆರೆಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಚಾಮರಾಜನಗರ, ಮಂಡ್ಯ, ಮೈಸೂರು, ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.