alex Certify ಭಾರಿ ಮಳೆ ಮುನ್ಸೂಚನೆ: ಇಂದು ಹಲವೆಡೆ ಶಾಲಾ, ಕಾಲೇಜಿಗೆ ರಜೆ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರಿ ಮಳೆ ಮುನ್ಸೂಚನೆ: ಇಂದು ಹಲವೆಡೆ ಶಾಲಾ, ಕಾಲೇಜಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ಹಲವೆಡೆ ಮಳೆಯ ಅಬ್ಬರ ಮುಂದುವರೆದಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ- ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುನ್ಸೂಚನೆ ಕಾರಣ ಆಗಸ್ಟ್ 2ರಂದು ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಜೋಯಿಡಾ, ದಾಂಡೇಲಿ ತಾಲೂಕಿನ ಎಲ್ಲಾ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನಲ್ಲಿ ಮುಂಜಾಗ್ರತೆ ಕ್ರಮವಾಗಿ ಶಾಲೆಗಳಿಗೆ ರಜೆ ನೀಡಲಾಗಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಆಗಸ್ಟ್ 2ರಂದು ರಜೆ ಘೋಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...