ಬೆಂಗಳೂರು: ರಾಜ್ಯದ ಹಲವೆಡೆ ಮುಂಗಾರು ಆರ್ಭಟ ಮುಂದುವರೆದಿದ್ದು, ಭಾನುವಾರ ಕೂಡ ಭಾರಿ ಮಳೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಕೊಡಗು ಜಿಲ್ಲೆಯಲ್ಲಿ ಜುಲೈ 9ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಜುಲೈ 9 ರಿಂದ 13 ರವರೆಗೆ ರಾಜ್ಯಾದ್ಯಂತ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಜುಲೈ 12 ಮತ್ತು 13 ರಂದು ಉತ್ತರ ಒಳನಾಡಿನಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಲ್ಲಿ ಭಾನುವಾರ ಭಾರಿ ಮಳೆ ಆಗಲಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ಸೋಮವಾರ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಗಾಳಿ ಬೀಸುವ ಸಾಧ್ಯತೆ ಇದೆ. ನಂತರ ಮಳೆ ಅಬ್ಬರ ಸ್ವಲ್ಪ ಕಡಿಮೆಯಾಗಿ ಜುಲೈ 13 ರಿಂದ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.