ಮಂಗಳೂರು: ನಿರಂತರವಾಗಿ ಸುರಿದ ಮಳೆಯಿಂದಾಗಿ ಮನೆ ಗೋಡೆ ಏಕಾಏಕಿ ಕುಸಿದು ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಜ್ಪೆಯ ಕರಂಬಾರು ಗ್ರಾಮದಲ್ಲಿ ನಡೆದಿದೆ.
ಜಯಂತಿ ಎಂಬುವವರ ಮನೆ ಗೋಡೆ ಕುಸಿದು ಬಿದ್ದಿದ್ದು, ಅದೃಷ್ಟವಸಾತ್ ಮನೆಯಲ್ಲಿದ್ದವರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆಯ ಒಂದು ಭಾಗ ಸಂಪೂರ್ಣ ಕುಸಿದು ಬಿದ್ದಿದ್ದು, ಉಳಿದ ಭಗಾಗಳಲ್ಲಿ ಅಲ್ಲಲ್ಲಿ ಬೃಹತ್ ಬಿರುಕು ಕಣಿಸಿಕೊಂಡಿದೆ. ಯಾವುದೇ ಕ್ಷಣದಲ್ಲಿ ಮನೆ ಸಂಪೂರ್ಣ ನೆಲಸಮವಾಗುವ ಸಾಧ್ಯತೆ ಇದೆ.
ಕುಟುಂಬದವರು ಮನೆಯಲ್ಲಿ ವಾಸಿಸಲು ಸಾಧ್ಯವಿಲ್ಲದ ಸ್ಥಿತಿ ಎದುರಾಗಿದ್ದು, ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮನೆಯಲ್ಲಿದ್ದವರನ್ನು ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ತಾಲೂಕು ಸಂಘಟನಾ ಸಂಚಲಕ ರುಕ್ಕಯ್ಯ ಅಮೀನ್ ಅವರ ಮನೆಗೆ ಸ್ಥಳಾಂತರಿಸಲಾಗಿದೆ.