alex Certify ಭಾರಿ ಮಳೆ ಹಿನ್ನಲೆ ಧಾರವಾಡ ಸೇರಿ ಹಲವೆಡೆ ಶಾಲೆಗಳಿಗೆ ರಜೆ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರಿ ಮಳೆ ಹಿನ್ನಲೆ ಧಾರವಾಡ ಸೇರಿ ಹಲವೆಡೆ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆ ಅಬ್ಬರ ಮುಂದುವರೆದ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಧಾರವಾಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ಇಂದು, ನಾಳೆ ರಜೆ ನೀಡಲಾಗಿದೆ. ಅಂಗನವಾಡಿ, ಶಾಲೆಗಳು, ಪಿಯು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಧಾರವಾಡ ಜಿಲ್ಲಾಧಿಕಾರಿ ದಿವ್ಯಾ ಪ್ರಭು ಶಾಲಾ, ಕಾಲೇಜುಗಳಿಗೆ ರಜೆ ನೀಡಿ ಆದೇಶಿಸಿದ್ದಾರೆ.

ಹಾಸನ ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಇಂದು ಸಕಲೇಶಪುರ ತಾಲೂಕಿನ ಶಾಲೆಗಳಿಗೆ ರಜೆ ನೀಡಲಾಗಿದೆ. ಡಿಡಿಪಿಐ ಹೆಚ್.ಕೆ. ಪಾಂಡು ರಜೆ ಘೋಷಣೆ ಮಾಡಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಮುಂಜಾಗ್ರತೆ ಕ್ರಮವಾಗಿ ಜುಲೈ 25, 26ರಂದು ಬೆಳಗಾವಿ, ಖಾನಾಪುರ, ನಿಪ್ಪಾಣಿ, ಚಿಕ್ಕೋಡಿ, ಬೈಲಹೊಂಗಲ, ಕಿತ್ತೂರು ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮಹಮ್ಮದ್ ರೋಷನ್ ಆದೇಶಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ 7 ತಾಲೂಕಿನ ಶಾಲಾ, ಕಾಲೇಜುಗಳಿಗೆ ಜುಲೈ 25ರಂದು ರಜೆ ಘೋಷಿಸಲಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಭಟ್ಕಳ, ದಾಂಡೇಲಿ, ಹೊನ್ನಾವರ ತಾಲೂಕಿನ ಶಾಲಾ, ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಆದೇಶ ಹೊರಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...