alex Certify ಗಮನಿಸಿ…! ಇನ್ನೂ 4 ದಿನ ಮುಂದುವರೆಯಲಿದೆ ಮಳೆ; ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ…! ಇನ್ನೂ 4 ದಿನ ಮುಂದುವರೆಯಲಿದೆ ಮಳೆ; ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

 ಬೆಂಗಳೂರು: ರಾಜ್ಯದಲ್ಲಿ ಚುರುಕುಗೊಂಡಿರುವ ಮುಂಗಾರು ಇನ್ನೂ ನಾಲ್ಕು ದಿನಗಳ ಕಾಲ ಮುಂದುವರೆಯಲಿದೆ. ಕರಾವಳಿ ಮತ್ತು ಉತ್ತರ ಒಳನಾಡು ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಅದೇ ರೀತಿ ಉತ್ತರ ಒಳನಾಡಿನ ಬೀದರ್, ಕಲಬುರ್ಗಿ, ಯಾದಗಿರಿ, ಕೊಪ್ಪಳ, ರಾಯಚೂರು, ಧಾರವಾಡ, ವಿಜಯಪುರ, ಹಾವೇರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಮೈಸೂರು, ಚಿಕ್ಕಮಗಳೂರು, ಚಾಮರಾಜನಗರ, ಕೊಡಗು, ಹಾಸನ, ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಳೆಯಾಗುವ ಸಾಧ್ಯತೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...