ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕಳೆದ ಎರಡು ದಿನಗಳಿಂದ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಸೆಪ್ಟೆಂಬರ್ 1 ರವರೆಗೆ ಮುಂದುವರಿಯಬಹುದು ಎಂದು ಹೇಳಲಾಗಿದೆ.
ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಮತ್ತು ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು, ಹಾಸನ, ಕೊಡಗು, ಹಾಗೂ ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಅತಿ ಹೆಚ್ಚಿನ ಮಳೆಯಾಗಲಿದ್ದು, ಆಗಸ್ಟ್ 30 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಒಳನಾಡಿನ ಯಾದಗಿರಿ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿಯೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಎರಡು ದಿನ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.